ಉಡುಪಿ: ಸರ್ಕಾರಿ ಗೌರವದೊಂದಿಗೆ ಬನ್ನಂಜೆ ಗೋವಿಂದಾಚಾರ್ಯರ ಅಂತ್ಯಕ್ರಿಯೆ
ಉಡುಪಿ: ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಅಂತ್ಯಕ್ರಿಯೆ ಇಂದು ರಾತ್ರಿ ಅಂಬಲಪಾಡಿಯ ಮನೆಯ ಆವರಣದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಜಿಲ್ಲಾಧಿಕಾರಿ ಜಿ. ಜಗದೀಶ್ ಜಿಲ್ಲಾಡಳಿತದ ಪರವಾಗಿ ಗೌರವ ಸಲ್ಲಿಸಿದರು. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸೂಚಿಸಿದರು. ಬಳಿಕ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಹಿರಿಯ ಪುತ್ರ ವಿನಯಭೂಷಣ ಆಚಾರ್ಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಾಸಕ ರಘುಪತಿ […]