ಉಡುಪಿ ಮೂಲದ ಉದ್ಯಮಿ ತೀರ್ಥಹಳ್ಳಿಯ ಲಾಡ್ಜ್ ನಲ್ಲಿ ನೇಣಿಗೆ ಶರಣು

ತೀರ್ಥಹಳ್ಳಿ: ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಮನನೊಂದ ಉಡುಪಿ ಮೂಲದ ಉದ್ಯಮಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ನಡೆದಿದೆ.ಉಡುಪಿಯ ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಹಳ್ಳಿಯ ವಸತಿಗೃಹವೊಂದರಲ್ಲಿ ವಾಸ್ತವ್ಯ ಹೂಡಿದ್ದರು. ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.ಸುಮಾರು ಆರು ಪುಟಗಳ ಡೆತ್ ನೋಟ್ […]