ತೆಕ್ಕಟ್ಟೆ: ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದ ಶಾಲಾ ವಾಹನ: ಚಾಲಕನಿಗೆ ಗಂಭೀರ ಗಾಯ

ಉಡುಪಿ: ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ‌ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತೆಕ್ಕಟ್ಟೆ ರಾ.ಹೆ.66ರ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಬ್ರಹ್ಮಾವರದಿಂದ ಹೆಮ್ಮಾಡಿ ಕಡೆಗೆ ಚಾಲಕ ಸಹಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದರು. ಈ ವೇಳೆ ಶಾಲಾ ವಾಹನಕ್ಕೆ ದ್ವಿಚಕ್ರ ವಾಹನವೊಂದು ಏಕಾಏಕಿ ಅಡ್ಡಬಂದ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯ ತೀವ್ರತೆಗೆ […]