ಉಡುಪಿ: ನಾಳೆ ಸಿಟಿ ಬಸ್ ಸಂಚಾರ ಇರಲಿದೆ- ಕುಯಿಲಾಡಿ

ಉಡುಪಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಾಳೆ (ಡಿ 08 ) ರೈತ ಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘ ಬೆಂಬಲ ಸೂಚಿಸಿಲ್ಲ. ಆದ್ದರಿಂದ ಎಂದಿನಂತೆ ಬಸ್ ಸಂಚಾರ ಇರಲಿದೆ ಎಂದು ಉಡುಪಿ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ತಿಳಿಸಿದ್ದಾರೆ.