ತುಳು ಭಾಷೆಗೆ ರಾಜ್ಯದ ಸ್ಥಾನಮಾನ ದೊರಕದಿರುವುದು ಬೇಸರದ ಸಂಗತಿ: ಶೇಷಶಯನ

ಉಡುಪಿ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಗೆ ರಾಜ್ಯದ ಸ್ಥಾನಮಾನ ದೊರಕದಿರುವುದು ಬೇಸರದ ಸಂಗತಿ. ಪ್ರತ್ಯೇಕ ಮಾನ್ಯತೆ ಸಿಕ್ಕಿದರೆ ತುಳು ಭಾಷೆಯ ಅಭಿವೃದ್ಧಿ ಹಾಗೂ ಸಾಹಿತ್ಯ, ಕಲೆ, ಪರಂಪರೆಯ ಬೆಳವಣಿಗೆಗೆ ಸಹಕಾರಿ ಆಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಹೇಳಿದರು. ತುಳುಕೂಟ ಉಡುಪಿ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಉಡುಪಿ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತುಳು […]