ತಿರುಪತಿಗೆ ಉಡುಪಿ-ಕುಂದಾಪುರದಿಂದ ನೇರ ರೈಲು ಸಂಪರ್ಕ..!

ಕುಂದಾಪುರ: ಪ್ರಸಿದ್ಧ ಪುಣ್ಯ ಕ್ಷೇತ್ರವಾದ ತಿರುಪತಿಗೆ ಉಡುಪಿ, ಕುಂದಾಪುರದಿಂದ ನೇರ ರೈಲು ಸಂಪರ್ಕ ಕಲ್ಪಿಸಬೇಕು ಅನ್ನುವ ಈ ಭಾಗದ ಜನರ ಬಹುದಿನಗಳ ಬೇಡಿಕೆ ಕೊನೆಗೂ ಈಡೇರಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಮನವಿಗೆ ಸ್ಪಂದಿಸಿರುವ ಕೇಂದ್ರ ರೈಲ್ವೇ ಸಚಿವಾಲಯವು ಮಂಗಳೂರುವರೆಗೆ ಬರುತ್ತಿದ್ದ ರೈಲು (12789/12790) ಅನ್ನು ಮುರ್ಡೇಶ್ವರದವರೆಗೆ ವಿಸ್ತರಿಸಲು ಒಪ್ಪಿಗೆ ನೀಡಿ ಆದೇಶಿಸಿದೆ. ಈ ರೈಲು ಸೇವೆಯೊಂದಿಗೆ ಹೈದರಾಬಾದ್ ನಗರಿಯೊಂದಿಗೂ ಸಂಪರ್ಕ ಸಾಧ್ಯವಾಗಲಿದೆ. ಹೈದರಾಬಾದಿನ ಕಾಚಿಗುಡದಿಂದ ಹೊರಟು ತಿರುಪತಿಯ ರೇಣಿಗುಂಟ ನಿಲ್ದಾಣದ ಮೂಲಕ ಮಂಗಳೂರಿಗೆ ಬರುತ್ತಿದ್ದ ಕಾಚಿಗುಡ […]