ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣ: ಮೂವರು ವಿದ್ಯಾರ್ಥಿಗಳ ವಿರುದ್ದ ಆರೋಪಪಟ್ಟಿ ಸಲ್ಲಿಕೆ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಮೂಲಕ ವಿಡಿಯೊ ಚಿತ್ರೀಕರಣ ಮಾಡಿರುವ ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು ಶಬನಾಜ್, ಅಲ್ಫಿಯಾ ಹಾಗೂ ಅಲಿಮತ್ ಉಲ್ ಶಫಾ ಎಂಬ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಸಹಪಾಠಿಯ ವಿಡಿಯೊ ಚಿತ್ರೀಕರಣ ಮಾಡಿರುವುದು ದೃಢಪಟ್ಟಿದೆ ಎಂದು ಉಲ್ಲೇಖಿಸಲಾಗಿದೆ. ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ಒಳಗೊಂಡ ಶೌಚಾಲಯ ವಿಡಿಯೋ ಪ್ರಕರಣದಲ್ಲಿ ಕರ್ನಾಟಕ ಸಿಐಡಿ ಸುಮಾರು 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದೆ. ಸಿಐಡಿಯು ಘಟನೆಯಲ್ಲಿ ಬಳಸಿದ […]