ಟೋಲ್ ಗೇಟ್ ರದ್ದತಿಗೆ ಕ್ರಮ: ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಉಡುಪಿ: ಪಡುಬಿದ್ರಿ-ಬೆಳ್ಮಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು‌ ಸರಿಯಲ್ಲ. ದಿನಂಪ್ರತಿ ಓಡಾಡುವ ರಸ್ತೆಗೆ ಎರಡೆರಡು ಬಾರಿ ಟೋಲ್ ಶುಲ್ಕ ಕಟ್ಟಲು ಸಾಧ್ಯವಿಲ್ಲ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ […]