ಉಡುಪಿ: ನಾಳೆ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ; ಮುಖ್ಯಮಂತ್ರಿ ಯಡಿಯೂರಪ್ಪ ಆಗಮನ

ಉಡುಪಿ: ಉಡುಪಿಯ ಅತ್ಯಂತ ಪ್ರಾಚೀನ ದೇಗುಲಗಳಗಳಲ್ಲಿ ಒಂದಾಗಿರುವ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸೋಮವಾರ (ಜ. 18) ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆಗಮಿಸಲಿದ್ದು, ಅಂದು ಸಂಜೆ ದೇಗುಲದ ಆವರಣದಲ್ಲಿ ನಡೆಯುವ ಧರ್ಮಸಭೆಯಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿರುವರು.‌ ಈ ಹಿಂದೆ 2004 ರಲ್ಲಿ ಮತ್ತು‌2010 ರಲ್ಲಿ ವಿವಿಧ ಜೀರ್ಣೋದ್ಧಾರ ಕಾರ್ಯಗಳನ್ನು ರಾಜ್ಯ ಸರಕಾರ ಮತ್ತು ಊರ ಪರವೂರ ಭಕ್ತಾಭಿಮಾನಿಗಳ ಸಹಕಾರದಲ್ಲಿ ನೆರವೇರಿಸಿ ವೈಭವದ ಬ್ರಹ್ಮಕಲಶೋತ್ಸವವನ್ನು ನೆರವೇರಿಸಲಾಗಿತ್ತು . ಅದರಲ್ಲೂ 2010 ರಲ್ಲಿ ಬ್ರಹ್ಮಕಲಶೋತ್ಸವದೊಂದಿಗೆ ನಡೆದ […]