ಉಡುಪಿ:ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಪ್ರವಾಸಿ ತಾಣಗಳ ಸೌಂದರ್ಯವನ್ನು ಸವಿಯಲು ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಈಗಾಗಲೇ ಜಾಗಗಳನ್ನು ಗುರುತಿಸಿರುವ ಕೋಡಿ ಕುಂದಾಪುರ ಬೀಚ್, ಕೋಡಿ ಕನ್ಯಾಣ ಬೀಚ್ ಹಾಗೂ ತ್ರಾಸಿ-ಮರವಂತೆ ಬೀಚ್ […]