ಉಡುಪಿ:ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಸ್ವಾಗತಾರ್ಹ ವಾತಾವರಣ ಕಲ್ಪಿಸಿ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲತೆಗಳನ್ನು ಹೆಚ್ಚಿಸುವ ಮೂಲಕ ಸ್ವಾಗತಾರ್ಹ ವಾತಾವರಣವನ್ನು ಕಲ್ಪಿಸಿ, ಮತ್ತಷ್ಟು ಪ್ರವಾಸೋದ್ಯಮ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಹೆಚ್ಚಿಸಬೇಕು ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಗೆ ಕಳೆದ ಸಾಲಿನಲ್ಲಿ 4 ಕೋಟಿ ರೂ. ಗೂ ಹೆಚ್ಚು ಪ್ರವಾಸಿಗರು ಬಂದು ಹೋಗಿದ್ದಾರೆ. […]