ಉಡುಪಿ: ಪ್ರವಾಸಿ ವಾಹನಗಳಿಗೆ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಪ್ರತಿಭಟನೆ

ಉಡುಪಿ: ಪ್ರವಾಸಿ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಕೆ.ರಘುಪತಿ ಭಟ್ ಮಾತನಾಡಿ, ಹಳೆ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಸುವ ಸ್ಥಿತಿಯಲ್ಲಿ ಚಾಲಕರು-ಮಾಲಕರು ಇಲ್ಲ. ಈಗಾಗಲೇ ಟ್ಯಾಕ್ಸಿ ಚಾಲಕ-ಮಾಲಕರು ಹಲವಾರು ತೆರಿಗೆಗಳನ್ನು ಪಾವತಿಸಿ ನಷ್ಟದಲ್ಲಿ ದಿನ ದೂಡುತ್ತಿದ್ದಾರೆ. ಹೊಸ ವಾಹನಗಳಿಗೆ ಅಳವಡಿಕೆ ಮಾಡುವ ನಿರ್ಧಾರವನ್ನು ಸರಕಾರ […]