ಉಡುಪಿ: ಲಾಕ್ ಡೌನ್ ನಿಯಮ ಉಲ್ಲಂಘಿಸಿದ ವಾಹನದಲ್ಲಿ ಕಸ ಸಾಗಾಟ
ಉಡುಪಿ: ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ಗೂಡ್ಸ್ ವಾಹನವೊಂದನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು, ಅದೇ ವಾಹನದವರಿಂದ ರಾ.ಹೆ. 66 ರ ಆಭರಣ ಮೋಟರ್ಸ್ ಎದುರಿನಿಂದ ಕಾಂಚನ ಮೋಟಾರ್ಸ್ ವರೆಗೆ ಹೆದ್ದಾರಿ ಬದಿಯಲ್ಲಿ ಬಿದ್ದಿದ್ದ ಕಸವನ್ನು ಸಂಗ್ರಹಿಸಿ ಅವರ ವಾಹನಕ್ಕೆ ತುಂಬಿಸಿ ಅಲೆವೂರಿನ ಡಂಪಿಂಗ್ ಯಾರ್ಡ್ ಗೆ ಸಾಗಿಸಿದರು. ಲಾಕ್ಡೌನ್ ಅವಧಿಯಲ್ಲಿ ಸಾರ್ವಜನಿಕರು ನಿಯಮ ಬಾಹಿರವಾಗಿ ವಾಹನಗಳಲ್ಲಿ ಸಂಚರಿಸದಂತೆ ಈ ಮೊದಲೇ ಸೂಚನೆ ನೀಡಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ […]