ಉಡುಪಿ: ಚಲಿಸುತ್ತಿದ್ದ ರೈಲು ಡಿಕ್ಕಿ; ವಿದ್ಯಾರ್ಥಿ ಮೃತ್ಯು

ಪಡುಬಿದ್ರಿ: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪಣಿಯೂರು ಕುಂಜೂರು ರೈಲು ಹಳಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ರಾಜಸ್ಥಾನದ ದವಕಿಶನ್ ಬಾಂಬು(17) ಎಂದು ಗುರುತಿಸ ಲಾಗಿದೆ. ಈತ ಶಾಲೆಯ ರಜೆಯ ಹಿನ್ನೆಲೆಯಲ್ಲಿ ಕುಮಟಾದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದು, ಅಲ್ಲಿಂದ ಮಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸಿದ್ದ ಎನ್ನಲಾಗಿದೆ. ದಾರಿ ಮಧ್ಯೆ ಪಡುಬಿದ್ರಿ ರೈಲ್ವೇ ನಿಲ್ದಾಣದಲ್ಲಿ ಇಳಿದಿದ್ದ ಬಾಂಬು, ಬಳಿಕ ರೈಲ್ವೇ ಹಳಿ ಬಳಿ ನಡೆದುಕೊಂಡು ಹೋಗುತ್ತಿದ್ದನು. ಈ ವೇಳೆ ಮಂಗಳೂರಿನಿಂದ ಉಡುಪಿ ಕಡೆ […]