ಉಡುಪಿ: ಕೊರೊನಾ ಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ನೀಡುವ ಕ್ಲಿನಿಕ್, ವೈದ್ಯರ ಮೇಲೆ ಸೂಕ್ತ ಕ್ರಮದ ಜತೆಗೆ ಲೈಸನ್ಸ್ ರದ್ದುಗೊಳಿಸಲಾಗುವುದು; ಡಿಸಿ ಜಿ. ಜಗದೀಶ್ ಎಚ್ಚರಿಕೆ
ಉಡುಪಿ: ಜಿಲ್ಲೆಯ ಸ್ಥಳೀಯ ಕ್ಲಿನಿಕ್ ಅಥವಾ ವೈದ್ಯರು ತಮ್ಮಲ್ಲಿಗೆ ಬರುವ ರೋಗಿಗಳಲ್ಲಿ ಕೊರೊನಾ ಲಕ್ಷಣ ಕಂಡುಬಂದಲ್ಲಿ ಅವರಿಗೆ ತಾತ್ಕಾಲಿಕ ಉಪಶಮನದ ಚಿಕಿತ್ಸೆ, ಔಷಧ ನೀಡಬಾರದು. ಅವರನ್ನು ಕೂಡಲೇ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಬರುವಂತೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಸ್ಥಳೀಯ ಕ್ಲಿನಿಕ್ ಅಥವಾ ವೈದ್ಯರು ಕೊರೊನಾ ಸೋಂಕಿನ ಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ನೀಡಿ, ಬಳಿಕ ರೋಗ ಉಲ್ಬಣಗೊಂಡು ರೋಗಿಗಳು ಮೃತಪಟ್ಟ ಪ್ರಕರಣಗಳು ಕಂಡುಬಂದಲ್ಲಿ ಅಂತಹ ವೈದ್ಯರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ 2005 […]