ಕಿನ್ನಿಗೋಳಿ: ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಿದ ಬಾಲಕಿಯ ಸಮಯಪ್ರಜ್ಞೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ..!

ಮಂಗಳೂರು: ಕಿನ್ನಿಗೋಳಿ ಸಮೀಪ ಸೆ.6ರಂದು ನಡೆದ ರಸ್ತೆ ಅಪಘಾತದ ವೇಳೆ ತಕ್ಷಣ ಸಹಾಯಕ್ಕೆ ಧಾವಿಸಿದ ಬಾಲಕಿಯೊಬ್ಬಳ ಸಮಯಪ್ರಜ್ಞೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಂಡಾಡಿದ್ದಾರೆ. ಈ ಬಗ್ಗೆ ‘ಎಕ್ಸ್’ನಲ್ಲಿಂದು ಪೋಸ್ಟ್‌ವೊಂದನ್ನು ಹಾಕಿರುವ ಮುಖ್ಯಮಂತ್ರಿ, ‘ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಢಿಕ್ಕಿ ಹೊಡೆದಿದೆ. ಈ ವೇಳೆ ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ’ […]