ಉಡುಪಿ:ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು : ವಾರ್ಷಿಕೋತ್ಸವ ಸಮಾರಂಭ

ಉಡುಪಿ:ಆತ್ಮ ವಿಶ್ವಾಸ, ಪ್ರಾಮಾಣಿಕತೆ ಮತ್ತು ಸತತ ಪರಿಶ್ರಮವಿದ್ದಾಗ ಮಾತ್ರ ವಿದ್ಯಾರ್ಥಿಗಳು ಗೆಲುವನ್ನು ಸಾಧಿಸಬಹುದು. ನಮ್ಮೊಳಗಿನ‌ ಹಿಂಜರಿಕೆಗೆ ನಾವೇ ಉತ್ತರ ಕಂಡುಕೊಳ್ಳಲು ಸಾಧ್ಯವಿಲ್ಲ ಎನ್ನುವವರ ಎದುರು ಅಸಾಧ್ಯವನ್ನ ಸಾಧಿಸಿ ತೋರಿಸುವವರಾಗಬೇಕು. ನಮ್ಮ ತಂದೆ ತಾಯಿಗಳ ಪ್ರೀತಿ ಆದರಗಳಿಗೆ ಪಾತ್ರರಾಗಿ ಪ್ರಬುದ್ಧ ವ್ಯಕ್ತಿಗಳಾಗಬೇಕೆಂದು ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಸಾಹಿತಿ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಇತ್ತೀಚಿಗೆ ಕಟಪಾಡಿಯ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ […]