ತ್ರಿಶಾ ಕ್ಲಾಸಸ್ : ಸಿ ಎಸ್ ಎಕ್ಸಿಕ್ಯೂಟಿವ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ : ಸಿ ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ತ್ರಿಶಾ ಕ್ಲಾಸಸ್ ವತಿಯಿಂದ ಸನ್ಮಾನ ಕಾರ್ಯಕ್ರಮವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಆಗಸ್ಟ್ 31 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ತ್ರಿಶಾ ಸಂಸ್ಥೆಯ ಅನುಭವಿ ಬೋಧಕರಾದ ಪ್ರೊಫೆಸರ್ ರಾಜ್ ಗಣೇಶ್ ಕಾಮತ್ ಹಾಗೂ ಸಿ ಎ ನಾಗೇಂದ್ರ ಭಕ್ತ ರವರು ಮಾತನಾಡಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ನಮ್ಮಲ್ಲಿ ಸತತ ಪ್ರಯತ್ನ ,ಕಠಿಣ ಪರಿಶ್ರಮ, ದೃಢ ಸಂಕಲ್ಪ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ […]