ವಿಶ್ವಾಸ, ನಂಬಿಕೆ, ಕಾರ್ಯದಕ್ಷತೆಯಿಂದ ಮುನ್ನಡೆದರೆ ಯಶಸ್ಸು ಸಾಧ್ಯ: ಬಿ.ಸಿ. ಲೋಕಪ್ಪ ಗೌಡ

ಉಡುಪಿ: ಸಹಕಾರ ಸಂಸ್ಥೆಗಳು ಜನರ ವಿಶ್ವಾಸ, ನಂಬಿಕೆಯೊಂದಿಗೆ ಕಾರ್ಯ ದಕ್ಷತೆಯಿಂದ ಮುನ್ನಡೆದರೆ ಯಶಸ್ಸು ಗಳಿಸಬಹುದು ಎಂದು ಮಹಾಮಂಡಳದ ನಿರ್ದೇಶಕ ಬಿ.ಸಿ. ಲೋಕಪ್ಪ ಗೌಡ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಶನಿವಾರ ಕಡಿಯಾಳಿ ಹೋಟೆಲ್ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. […]