ಮಕ್ಕಳಿಗೆ ಎಳವೆಯಲ್ಲಿ ತುಳು ಕಲಿಸಿದರೆ ಮಾತ್ರ ತುಳು ಸಂಸ್ಕೃತಿ‌ ಉಳಿಸಲು ಸಾಧ್ಯ: ಪೂರ್ಣಿಮಾ

ಉಡುಪಿ: ಮಕ್ಕಳಿಗೆ ತುಳುವನ್ನು ಎಳವೆಯಲ್ಲಿ ಕಲಿಸಿದರಷ್ಟೇ ಆ ಭಾಷೆ ಸಂಸ್ಕೃತಿ ಉಳಿಯಬಲ್ಲದು ಎಂದು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹೇಳಿದರು. ಅವರು ಭಾನುವಾರ ಉಡುಪಿ ತುಳುಕೂಟದ 30 ನೇ ವರ್ಷದ ‘ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತಿದ್ದರು. ಮಕ್ಕಳಿಗೆ ಉಪದೇಶ ಮಾಡುವುದಕ್ಕಿಂತ ಅವರಿಗೆ ಅವಕಾಶಗಳನ್ನು ಒದಗಿಸಿ ಕೊಡಬೇಕು, ಈ ನಿಟ್ಟಿನಲ್ಲಿ ಎಸ್.ಎಸ್..ಎಲ್.ಸಿ.ಯಲ್ಲಿ ತುಳು ಅಧ್ಯಯನಕ್ಕೆ ಅವಕಾಶ ಮಾಡಿಕೊಡುತ್ತಿರುವುದು ಆಶಾದಾಯಕವಾಗಿದೆ. ಮಕ್ಕಳು ತುಳು ಭಾಷೆಯ ಅಧ್ಯಯನ, ಬಳಕೆ ಕೇವಲ […]