ನ.30ರಂದು ಉಡುಪಿಯಲ್ಲಿ ‘ತುಳು ಮಿನದನ-2024 ಕಾರ್ಯಕ್ರಮ’

ಉಡುಪಿ: ತುಳುಕೂಟ ಉಡುಪಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಜೈ ತುಳುನಾಡ್ ಉಡುಪಿ, ರೋಟರಿ ಕ್ಲಬ್ ಕಲ್ಯಾಣಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ತುಳು ಮಿನದನ-2024” ಕಾರ್ಯಕ್ರಮವನ್ನು ಇದೇ ನ.30ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಕಾರ್ಯಕ್ರಮವನ್ನು […]