ಉಡುಪಿ: ತುಳುನಾಡಿನ ಸಾಂಪ್ರದಾಯಿಕ ಆಚರಣೆಗೆ ಅವಕಾಶ ಕಲ್ಪಿಸುವಂತೆ ಡಿಸಿ, ಎಸ್ಪಿಗೆ ಮನವಿ

ಉಡುಪಿ: ಉಡುಪಿ ಜಿಲ್ಲಾಡಳಿತ ರೂಪಿಸಿರುವ ಕಠಿಣ ನಿಯಮಾವಳಿಗಳಿಂದ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಸಂಸ್ಕೃತಿಯ ಭಾಗವಾಗಿರುವ ಕಂಬಳ, ಕೋಳಿ ಅಂಕ, ಯಕ್ಷಗಾನ, ನೇಮೋತ್ಸವ, ನಾಗ ಮಂಡಲ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರವನ್ನು ಪುನರ್‌ಪರಿಶೀಲಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ದೈವಾರಾಧನೆಯ ಚೌಕಟ್ಟಿನಲ್ಲಿ ದೈವಗಳಿಗೆ ರಕ್ತಹಾರದ ಕಲ್ಪನೆಯಲ್ಲಿ ಹಲವು ದೈವಸ್ಥಾನ, ಮಂದಿರಗಳಲ್ಲಿ ಹಲವಾರು ದಶಕಗಳಿಂದ ಕೋಳಿ ಪಡೆ ಆಯೋಜಿಸುವ ಪದ್ಧತಿ ಇದೆ […]