ಉಡುಪಿ-ಉಚ್ಚಿಲ ದಸರಾಕ್ಕೆ ಅದ್ಧೂರಿ ಚಾಲನೆ: ದೇವಿಯ ದರ್ಶನಕ್ಕೆ ಹರಿದು ಬಂದ ಜನಸಾಗರ.!

ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲಿ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮೀ ದೇವಾಲಯದಲ್ಲಿ ದಸರಾ ಪ್ರಯುಕ್ತ ನವದುರ್ಗೆಯರ ಪ್ರತಿಷ್ಠಾಪನೆ ನಡೆದಿದೆ. ದೇವರ ಸೇವೆಯ ಜೊತೆಗೆ ಕರಾವಳಿಯ ಸಂಸ್ಕೃತಿ ಆಚಾರ ವಿಚಾರ ಪ್ರತಿಬಿಂಬಿಸುವ ಆಕರ್ಷಕ ವಸ್ತು ಪ್ರದರ್ಶನ ಲಕ್ಷಾಂತರ ಜನರ ಗಮನ ಸೆಳೆಯುತ್ತಿವೆ. ಉಡುಪಿ ಜಿಲ್ಲೆಯ ಉಚ್ಚಿಲದಲ್ಲಿ ಭವ್ಯವಾಗಿ ನಿರ್ಮಾಣಗೊಂಡಿರುವ, ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವೈಭವದಿಂದ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ. ಶಾರದಾ ಮಾತೆಗೆ ಆರತಿ ಬೆಳಗಿ‌ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಬಳಿಕ ವೇದಿಕೆಯಲ್ಲಿ ಹಲವು […]