ಅ.3ರಿಂದ 12ರ ವರೆಗೆ ಉಡುಪಿ-ಉಚ್ಚಿಲ ದಸರಾ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮೂರನೇ ವರ್ಷದ “ಉಡುಪಿ-ಉಚ್ಚಿಲ ದಸರಾ-2024” ಕಾರ್ಯಕ್ರಮವು ಅಕ್ಟೋಬರ್ 3ರಿಂದ 12ರ ವರೆಗೆ ಶ್ರೀಮತಿ ಶಾಲಿನಿ ಡಾ| ಜಿ. ಶಂಕರ್‌ ಸಭಾಂಗಣದಲ್ಲಿ ಜರಗಲಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ| ಜಿ. ಶಂಕರ್‌ ಹೇಳಿದರು. ಉಚ್ಚಿಲ ಮೊಗವೀರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಆಕರ್ಷಕ ಮಂಟಪದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 10 ದಿನಗಳ […]