ಉಡುಪಿ:ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಯುವಜನರಲ್ಲಿ ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಬುಧವಾರ ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸಾರ್ವಜನಿಕ […]