ಉಡುಪಿ:ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ : ನಿಷೇಧಾಜ್ಞೆ ಜಾರಿ

ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತಿಯ 33 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸುವಂತೆ ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದ್ದು, ಆಯೋಗದ ನಿರ್ದೇಶನದಂತೆ ಡಿಸೆಂಬರ್ 8 ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ […]