ಉಡುಪಿ:ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವ ಮನೋಭಾವ ಹೊಂದಲಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ

ಉಡುಪಿ: ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಉತ್ತಮವಾಗಿ ಬರೆಯುವಂತೆ ಅವರುಗಳ ಮನಸ್ಥಿತಿಯನ್ನು ಹೊಂದುವAತೆ ಪೂರಕ ಕಾರ್ಯಗಳನ್ನು ಶಾಲಾ ಶಿಕ್ಷಕರು ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪಠ್ಯಕ್ರಮಗಳನ್ನು ಪೂರ್ಣಗೊಳಿಸಿದ್ದು, ಅಂತಿಮವಾಗಿ […]