ಉಡುಪಿ:ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳು ಮಾರಾಟವಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯ ಅಂತರದಲ್ಲಿ ಯಾವುದೇ ಅಂಗಡಿ, ಹೋಟೆಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಅವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಳೆದ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ […]