ಉಡುಪಿ:ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಅವರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲ್ಪೆ ಬೀಚ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಕುರಿತು ನಿರ್ಮಿತಿ ಕೇಂದ್ರವು ಯೋಜನಾ ಕಾಮಗಾರಿಗಳ ನೀಲನಕ್ಷೆ ಹಾಗೂ ಅಂದಾಜು […]