ಉಡುಪಿ:ಸಮಾಜದಲ್ಲಿ ದುರ್ಬಲರಾದ ಹೆಣ್ಣು ಮಕ್ಕಳು ಹಾಗೂ ಮಕ್ಕಳಿಗೆ ಅಗತ್ಯ ಕಾನೂನು ನೆರವು ಒದಗಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಮಾಜದಲ್ಲಿ ದುರ್ಬಲರಾದ ಹೆಣ್ಣು ಮಕ್ಕಳು ಹಾಗೂ ಮಕ್ಕಳ ಮೇಲೆ ದೌರ್ಜನ್ಯವಾದಾಗ ನೋಂದ ಸಂತ್ರಸ್ತರಿಗೆ ಸಾಂತ್ವನ ಹೇಳುವುದರ ಜೊತೆಗೆ ಅಗತ್ಯವಿರುವ ಕಾನೂನಿನ ನೆರವು, ವೈದ್ಯಕೀಯ ಚಿಕಿತ್ಸೆ ಕೊಡಿಸಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾಂತ್ವನ ಮಹಿಳಾ ಸಹಾಯವಾಣಿ […]