ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳ ಸಮಿತಿ ವಾರ್ಷಿಕ ಸಭೆ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಂಪ್ರದಾಯ ಆಚರಣೆಗಳಲ್ಲೊಂದಾದ ಕಂಬಳವನ್ನು ಉಳಿಸಿ ಬೆಳೆಸುವ ದೃಷ್ಟಿಯಲ್ಲಿ ಕಾರ್ಯೋನ್ಮುಖರಾಗಿರುವ ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳ ಸಮಿತಿಯ ವಾರ್ಷಿಕ ಸಭೆಯು ಬ್ರಹ್ಮಾವರದ ಧರ್ಮಾವರಂ ಆಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು. ಇದೀಗ ಮುಂದಿನ ಒಂದು ತಿಂಗಳಲ್ಲಿ ಜಿಲ್ಲೆಯ ಸುಮಾರು 35ಕ್ಕೂ ಹೆಚ್ಚಿನ ಸಂಪ್ರದಾಯ ಕಂಬಳ ಆಯೋಜನೆಯ ದಿನಾಂಕವನ್ನು ವಿವಿಧ ಸಂಘಟಕರು ತೀರ್ಮಾನಿಸುವುದರೊಂದಿಗೆ, ಇಂದಿನ ಕಾಲಘಟ್ಟದಲ್ಲಿ ಕಂಬಳವನ್ನು ಆಯೋಜನೆ ಮಾಡುವುದರ ಜೊತೆಗೆ ಈ ಪರಂಪರೆಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಬಗ್ಗೆಯೂ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಕಂಬಳ ಸಮಿತಿಯ ಕಾನೂನು […]