ಎಸ್. ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿ 6.09 ಕೋಟಿ ರೂ. ಲಾಭ: ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ

ಮಂಗಳೂರು: ವಜ್ರಮಹೋತ್ಸವ ಸಂಭ್ರಮಾಚರಣೆಯಲ್ಲಿರುವ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿ 2024-25ನೇ ಸಾಲಿನಲ್ಲಿ 1292.45 ಕೋಟಿ ರೂ. ವ್ಯವಹಾರ ನಡೆಸಿ 6.09 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ತಿಳಿಸಿದ್ದಾರೆ. 1964ರಲ್ಲಿ ದೇವಮಾನವ ದಿ|ಪಾಲ್ಕೆ ಬಾಬುರಾಯ ಆಚಾರ್ಯರ ಮುಂದಾಳತ್ವದಲ್ಲಿ ಸ್ಥಾಪನೆಗೊಂಡ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯು ಒಟ್ಟು 22848 ಸದಸ್ಯ ರಿಂದ 7.03 ಕೋಟಿ ರೂ ಪಾಲು ಬಂಡವಾಳ ಹೊಂದಿದೆ. ಒಟ್ಟು ಠೇವಣಿ 253.86 ಕೋಟಿ ರೂ. ಇದ್ದು, ಸದಸ್ಯ/ಗ್ರಾಹಕರಿಗೆ ಚಿನ್ನಾಭರಣ ಸಾಲ, […]