ಉಡುಪಿ: ನಗರ ಕುಟುಂಬ ಕಲ್ಯಾಣ ಕೇಂದ್ರ ಸ್ಥಗಿತ; ಪುನರಾರಂಭಿಸಲು ಆಗ್ರಹ

ಉಡುಪಿ: ಕುಕ್ಕಿಕಟ್ಟೆ ಡಯಾನ ಚಿತ್ರಮಂದಿರದ ಎದುರು ಸುಮಾರು ಇಪ್ಪತ್ತು ವರ್ಷಗಳಿಂದ ಸೇವಾ ನಿರತವಾಗಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರವು ಸೇವೆಯನ್ನು ಸ್ಥಗಿತಗೊಳಿಸಿದ್ದು, ಬಾಗಿಲಿಗೆ ಬೀಗ ಜಡಿಯಲಾಗಿದೆ. ಇದರಿಂದ ಪರಿಸರದ ಸುತ್ತಮುತ್ತಲಿನ ನಾಗರಿಕರು ಚಿಕಿತ್ಸೆ ಪಡೆಯಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಿಶುಗಳಿಗೆ ಲಸಿಕೆ, ಚುಚ್ಚುಮದ್ದು ಹಾಗೂ ಗರ್ಭಿಣಿಯರಿಗೆ ತಪಾಸಣೆ, ಅಗತ್ಯ ಚಿಕಿತ್ಸೆಗಳು ಕ್ಲಪ್ತ ಸಮಯದಲ್ಲಿ ದೊರೆಯುತಿತ್ತು. ಅಲ್ಲದೆ ಜ್ವರಬಾಧೆ, ಶೀತ, ಕೆಮ್ಮು ಮೊದಲಾದ ವ್ಯಾಧಿಗಳಿಂದ ಬಳಲುವ ರೋಗಿಗಳು ಚಿಕಿತ್ಸೆ ಪಡೆಯಲು ಅವಕಾಶವಿತ್ತು. ಕೇಂದ್ರ ಸ್ಥಗಿತಗೊಂಡಿರುವುದರಿಂದ ನಗರದ ಖಾಸಗಿ ಆಸ್ಪತ್ರೆಗಳಲ್ಲಿ […]