ದಕ್ಷಿಣ ಕನ್ನಡ, ಉಡುಪಿಗೆ ಚಡ್ಡಿ ಗ್ಯಾಂಗ್ ಎಂಟ್ರಿ: ಕಳ್ಳರ ಕೃತ್ಯ ಸಿಸಿ ಕೆಮರಾದಲ್ಲಿ ಸೆರೆ.

ಮಂಗಳೂರು: ಮಂಗಳೂರು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‘ಚಡ್ಡಿ ಗ್ಯಾಂಗ್’ ಎಂಬ ಕಳ್ಳರ ತಂಡ ಶನಿವಾರ ರಾತ್ರಿ ಕೋಡಿಕಲ್‌ನ ಮನೆಯೊಂದರಲ್ಲಿ ಕಳ್ಳತನ ಘಟನೆ ನಡೆದಿದ್ದು, ಇದೇ ತಂಡ ಕೃತ್ಯವೆಸಗಿರುವ ಬಗ್ಗೆ ಪೊಲೀಸರು ಸಂದೇಹ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್, ಮಧ್ಯಪ್ರದೇಶ, ರಾಜಸ್ಥಾನ ಮೊದಲಾದೆಡೆಗಳ ಕಳ್ಳರನ್ನು ಹೊಂದಿರುವ ಚಡ್ಡಿ ಗ್ಯಾಂಗ್, ಈ ಹಿಂದೆಯೂ ದ.ಕ., ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮನೆ ಕಳ್ಳತನ ಕೃತ್ಯ ನಡೆಸಿದೆ. ಕಳ್ಳರು ಮೈಮೇಲೆ ಚಡ್ಡಿ, ಬನಿಯಾನ್, ತಲೆ ಮೇಲೊಂದು ಬಟ್ಟೆ ಸುತ್ತಿಕೊಂಡಿದ್ದು, ಗ್ಯಾಂಗ್‌ನ ಸದಸ್ಯರು ಸೊಂಟದಲ್ಲಿ […]