ಉತ್ತರ ಪ್ರದೇಶ: ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಯೋಗಿ ಸೂಚನೆ!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅಕ್ರಮ ವಲಸಿಗರ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ, ರಾಷ್ಟ್ರೀಯ ಭದ್ರತೆ ಮತ್ತು ಸಾಮಾಜಿಕ ಸಾಮರಸ್ಯ ಪ್ರಮುಖ ಆದ್ಯತೆಗಳಾಗಿದ್ದು, ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಸಿಎಂ ಆದೇಶದಲ್ಲಿ ಹೇಳಿದ್ದಾರೆ. ‘ಪ್ರತಿಯೊಂದು ಜಿಲ್ಲಾಡಳಿತ ತಮ್ಮ ಪ್ರದೇಶದಲ್ಲಿ ವಾಸಿಸುವ ಅಕ್ರಮ ವಲಸಿಗರ ಗುರುತಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು […]