ಉಡುಪಿ:ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸುವಲ್ಲಿ ವಚನಗಳು ಪ್ರಮುಖ ಪಾತ್ರ ವಹಿಸುತ್ತವೆ : ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

ಉಡುಪಿ: 12 ನೇ ಶತಮಾನವು ವಚನ ಸಾಹಿತ್ಯದಲ್ಲಿ ಬಹು ಮುಖ್ಯವಾದ ಕಾಲಘಟ್ಟವಾಗಿದ್ದು, ವಚನಕಾರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸಿ, ಸಮಾನತೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಅಜ್ಜರಕಾಡುವಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ […]