ವಾಲ್ಮೀಕಿ- ಮುಡಾ ಹಗರಣ ಖಂಡಿಸಿ ಆ. 3ರಿಂದ ಪಾದಯಾತ್ರೆೆ; ಜಿಲ್ಲೆಯಿಂದ 500 ಮಂದಿ ಭಾಗಿ

ಉಡುಪಿ: ವಾಲ್ಮೀಕಿ ಹಾಗೂ ಮುಡಾ ಹಗರಣ ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಆ. 3ರಿಂದ 7 ದಿನಗಳ ಪಾದಯಾತ್ರೆೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಿಂದ ಮೈಸೂರಿನವರೆಗೆ ನಡೆಯುವ ಪಾದಯಾತ್ರೆಯಲ್ಲಿ ಜಿಲ್ಲೆಯ 500 ಮಂದಿ ಭಾಗವಹಿಸಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ವಿಠಲ ಪೂಜಾರಿ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡೂ ಹಗರಣಗಳಲ್ಲಿ ಸರಕಾರದ ಕೈವಾಡವಿದೆ. ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು. ಪರಿಶಿಷ್ಟ […]