ಉಡುಪಿ: ಮೇ.29, 30ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.

ಉಡುಪಿ: ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಇಂದ್ರಾಳಿ, ಫೀಡ‌ರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಮೇ.29ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಹಮ್ಮಿಕೊಳ್ಳಲಾಗಿದೆ. ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಮೇ.30ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪ್ರಗತಿನಗರ ಫೀಡರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಪ್ರಗತಿನಗರ, ಶಾಂತಿನಗರ, ರಾಜೀವನಗರ, 80 ಬಡಗುಬೆಟ್ಟು ಪ್ರದೇಶಗಳಲ್ಲಿ ವಿದ್ಯುತ್ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.