ಉಡುಪಿ:ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆ: ಪ.ಜಾತಿ/ ಪಂಗಡದ ರೈತರಿಂದ ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ರೈತರುಗಳಿಂದ ಅರ್ಜಿಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ಕಾಳುಮೆಣಸು, ಗೇರು, ಅಂಗಾಂಶ ಬೆಳೆ, ಹೈಬ್ರಿಡ್ ತರಕಾರಿ ಹೊಸ ತೋಟಗಳ ಸ್ಥಾಪನೆಗೆ ಶೇ. 50 ರ ಸಹಾಯಧನ, ಪ್ಲಾಸ್ಟಿಕ್ ಹೊದಿಕೆ ಅಳವಡಿಸಲು ಶೇ. 50 ರ ಸಹಾಯಧನ, ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಗರಿಷ್ಠ 0.75 ಲಕ್ಷ […]