ಉಡುಪಿ:ವೇದದ ಸಾರವನ್ನು ಜಗತ್ತಿಗೆ ಸಾರಿದವರು ಶಂಕರಾಚಾರ್ಯರು : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಸಮಾಜದ ಏಳಿಗೆಗಾಗಿ ಹಾಗೂ ಧರ್ಮದ ರಕ್ಷಣೆಗಾಗಿ ದೇಶದಾದ್ಯಂತ ಸಂಚರಿಸಿ, ವೇದದ ಸಾರವನ್ನು ಜಗತ್ತಿಗೆ ಸಾರಿರುವ ಶಂಕರಾಚಾರ್ಯರ ಜೀವನ ಸಾಧನೆ ಪ್ರತಿಯೊಬ್ಬರಿಗೂ ದಾರಿದೀಪವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯಯ ಭಾವಚಿತ್ರಕ್ಕೆ ಪುಸ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. […]