ಸೆ.29ರಂದು ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭ

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ ಅಂಗಸಂಸ್ಥೆ ವಿದ್ಯಾಪೋಷಕ್‌ನ 20ನೇ ವರ್ಷದ ವಿನಮ್ರ ಸಹಾಯಧನ ವಿತರಣಾ ಸಮಾರಂಭವು ಇದೇ ಸೆ.29ರಂದು ಬೆಳಿಗ್ಗೆ 9ರಿಂದ ಸಂಜೆ 4.30ರ ವರೆಗೆ ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ತಿಳಿಸಿದರು. ಉಡುಪಿ ಪತ್ರಿಕಾ ಭವನದಲ್ಲಿ ಇಂದು‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ […]