ಉಡುಪಿ:ಗ್ರಾಮ ಪಂಚಾಯತ್ ಉಪ ಚುನಾವಣೆ : ನಿಷೇಧಾಜ್ಞೆ ಜಾರಿ

ಉಡುಪಿ: ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಗ್ರಾಮ ಪಂಚಾಯತಿಯ -1 ಹಾಗೂ ಕಾಪು ತಾಲೂಕಿನ ಪಡುಬಿದ್ರೆ ಗ್ರಾಮ ಪಂಚಾಯತಿಯ -1 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶಿಸಿದ್ದು, ಅದರಂತೆ ಮೇ 25 ರಂದು ಉಪಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ […]