ರಾಜ್ಯ ಸರಕಾರದ ದಿವಾಳಿತನ, ಹಗರಣಗಳನ್ನು ಮರೆಮಾಚಲು ಯತ್ನಿಸುತ್ತಿರುವ ಸೊರಕೆ ನಡೆ ಖಂಡನೀಯ; ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಜನತೆಯಿಂದ ತಿರಸ್ಕರಿಸಲ್ಪಟ್ಟ ವಿನಯ್ ಕುಮಾರ್ ಸೊರಕೆ, ಗೌರವಯುತವಾಗಿ ರಾಜಕೀಯ ನಿವೃತ್ತಿ ಪಡೆಯುವ ಬದಲು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಿವಾಳಿತನ ಮತ್ತು ಹಗರಣಗಳನ್ನು ಮರೆಮಾಚುವ ದುರುದ್ದೇಶದಿಂದ ಕ್ಷುಲ್ಲಕ ರಾಜಕಾರಣ ನಡೆಸುತ್ತಿದ್ದಾರೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವಿರುದ್ಧ ಕೀಳುಮಟ್ಟದ ಅಪಪ್ರಚಾರ ನಡೆಸುತ್ತಿರುವ ಸೊರಕೆ ನಡೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದರು.ಉಡುಪಿ ಪತ್ರಿಕಾ ಭವನದಲ್ಲಿ ಇಂದು ನಡೆದ […]