ಉಡುಪಿ:ವಿಶ್ವಕರ್ಮರಿಂದ ಸುಂದರ ಸಮಾಜ ನಿರ್ಮಾಣ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಸುಂದರ ಸಮಾಜ ನಿರ್ಮಾಣ ಮಾಡುವಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರವಾದುದು. ವಿಶ್ವಕರ್ಮಸಮುದಾಯದವರ ವಾಸ್ತುಶಿಲ್ಪ ರಚನಾ ಶೈಲಿಯು ಪ್ರತಿಯೊಬ್ಬರನ್ನು ಬೆರಗುಗೊಳಿಸುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಮಂಗಳವಾರ ನಗರದ ಕುಂಜಿಬೆಟ್ಟುವಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪಂಚಮುಖಿ ವಿಶ್ವಕರ್ಮರನ್ನು ನಾನಾ ರೀತಿಯಲ್ಲಿ ಸಮಾಜ ನೆನೆಪಿನಲ್ಲಿಟ್ಟುಕೊಳ್ಳುತ್ತದೆ. ಮರಗೆಲಸ, ಕಬ್ಬಿಣದ […]