ರಘುಪತಿ ಭಟ್‌ ಅವರಿಗೆ ವಿಶ್ವವಾಣಿ ಗ್ಲೋಬಲ್‌ ಅಚೀವರ್ಸ್ ಅವಾರ್ಡ್

ಬೆಂಗಳೂರು: ವಿಶ್ವವಾಣಿ ಪತ್ರಿಕೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರತಿವರ್ಷ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’ ನೀಡಲಾಗುತ್ತಿದ್ದು ಈ ಬಾರಿ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರು ಆಯ್ಕೆಯಾಗಿದ್ದಾರೆ. ಓಮನ್‌ ರಾಜಧಾನಿ ಮಸ್ಕತ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಘುಪತಿ ಭಟ್‌ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. 2004ರಲ್ಲಿ ಪ್ರಥಮ ಬಾರಿಗೆ ಉಡುಪಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ರಘುಪತಿ ಭಟ್‌ ಅವರು 2008 ಹಾಗೂ 2018 ಹೀಗೆ ಮೂರು ಅವಧಿಗೆ ಶಾಸಕರಾಗಿ ಕಾರ್ಯನಿರ್ವಹಿಸಿರುತ್ತಾರೆ. ಹಡಿಲು ಬಿದ್ದ ಗದ್ದೆಯಲ್ಲಿ ಕೃಷಿ […]