ಉಡುಪಿ: ಭಕ್ತ ಜನಸಾಗರದ ಮಧ್ಯೆ ವೈಭವದ ವಿಟ್ಲಪಿಂಡಿ ಉತ್ಸವ

ಉಡುಪಿ: ಪೊಡವಿಗೊಡೆಯ ಶ್ರೀಕೃಷ್ಣನ ಜನ್ಮ ಹಾಗೂ ಬಾಲಲೀಲೆಗಳನ್ನು ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವವು ಕೃಷ್ಣಮಠದಲ್ಲಿ ಸೋಮವಾರ ಭಕ್ತ ಜನಸಾಗರದ ಮಧ್ಯೆ ವೈಭವದಿಂದ ಸಂಪನ್ನಗೊಂಡಿತು. ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು ಮಧ್ಯಾಹ್ನದ ಮಹಾಪೂಜೆ ನೆರವೇರಿಸಿದರು. ಬಳಿಕ ಉತ್ಸವಕ್ಕೆಂದು ವಿಶೇಷವಾಗಿ ತಯಾರಿಸಲಾದ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತಂದು ಚಿನ್ನದ ರಥದಲ್ಲಿರಿಸಿ ರಥಬೀದಿಯ ಸುತ್ತ ಮೆರವಣಿಗೆ ನಡೆಸಲಾಯಿತು. ಇನ್ನೊಂದು ರಥದಲ್ಲಿ ಅನಂತೇಶ್ವರ ಹಾಗೂ ಚಂದ್ರಮೌಳೀಶ್ವರ ಉತ್ಸವ ಮೂರ್ತಿನ್ನಿರಿಸಿ ಮೆರವಣಿಗೆ ನಡೆಸಲಾಯಿತು. ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಪುತ್ತಿಗೆ […]