ಉಡುಪಿ:ಶಕ್ತಿ ಸದನ ಪ್ರಾರಂಭಿಸಲು ಸ್ವಯಂ ಸೇವಾ ಸಂಸ್ಥೆೆಗಳಿಂದ ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರದ ವತಿಯಿಂದ ಸ್ವಾಧಾರ ಮತ್ತು ಉಜ್ವಲ ಯೋಜನೆಗಳು ಅನುಷ್ಟಾನಗೊಳ್ಳುತ್ತಿದ್ದು, ಸ್ವಾಧಾರ ಗೃಹ ಯೋಜನೆಯ ಮುಖ್ಯ ಉದ್ದೇಶ ಕಷ್ಟಕರ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗೆ ಆಶ್ರಯ, ತರಬೇತಿ ಹಾಗೂ ಶಿಕ್ಷಣ ನೀಡುವುದರ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಸಶಕ್ತರನ್ನಾಗಿ ಮಾಡುವುದಾಗಿರುತ್ತದೆ. ಉಜ್ವಲ ಯೋಜನೆಯು ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟಲು ಹಾಗೂ ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ದುರುಪಯೋಗಕ್ಕೆ ಒಳಪಟ್ಟವರನ್ನು ರಕ್ಷಿಸಲು ಮತ್ತು ಪುನರ್ವಸತಿ ಕಲ್ಪಿಸಲು ಹಾಗೂ ಇವರುಗಳ ಕುಟುಂಬದವರೊಂದಿಗೆ ಪುನರ್ ವಿಲೀನಗೊಳಿಸುವ ಉದ್ದೇಶವನ್ನು ಹೊಂದಿರುತ್ತದೆ. ಕೇಂದ್ರ ಸರ್ಕಾರದ ಮಿಷನ್ […]