ಉಡುಪಿ: ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು – ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್.

ಉಡುಪಿ: ಉಡುಪಿಯು ರಕ್ತದಾನಿಗಳ ಜಿಲ್ಲೆಯಾಗಿದ್ದು, ರಕ್ತವನ್ನು ಭೇದ ಭಾವವಿಲ್ಲದೆ ಅಗತ್ಯವಿರುವವರಿಗೆ ನೀಡುವುದು ನಮ್ಮ ಉದ್ದೇಶವಾಗಿದೆ. ರಕ್ತದ ನಿರಂತರ ಸೇವೆಯು ಜನರಿಗೆ ಅವಶ್ಯವಿರುವುದರಿಂದ ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನದಲ್ಲಿ ಪಾಲ್ಗೊಂಡು ಜೀವ ಉಳಿಸುವ ಪುಣ್ಯ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್. ಹೇಳಿದರು. ಅವರು ಶುಕ್ರವಾರ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ […]