ಉಡುಪಿ:ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಹ ಭಾರತೀಯ ನಾಗರಿಕರಿಗೆ ಅವಕಾಶ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲುಅವಕಾಶವಿದ್ದು, ಅರ್ಹ ದಾಖಲೆಗಳನ್ನು ನೀಡುವುದರೊಂದಿಗೆ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ –ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯ ಬೈಂದೂರು, ಕುಂದಾಪುರ, ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ […]