ವಿಧಾನ ಪರಿಷತ್ ಉಪಚುನಾವಣೆ; ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮತದಾನ

ಉಡುಪಿ: ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಜನಪ್ರತಿನಿಧಿಗಳ ಕ್ಷೇತ್ರ ವಿಧಾನ ಪರಿಷತ್ ಉಪಚುನಾವಣೆಗೆ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ.ಉಡುಪಿ ನಗರಸಭೆಯ ಮತಗಟ್ಟೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಬಿಜೆಪಿ ನಗರಸಭಾ ಸದಸ್ಯರ ಜೊತೆಗೂಡಿ ಮತದಾನ ಮಾಡಿದರು.